HDFC ಕಡೆಯಿಂದ 75000 ಸ್ಕಾಲರ್ಶಿಪ್ ವಿದ್ಯಾರ್ಥಿಗಳಿಗೆ : ಇಲ್ಲಿದೆ ಲಿಂಕ್ ನೋಡಿ
ನಮಸ್ಕಾರ ಸ್ನೇಹಿತರೆ ರೈತರಿಗೆ ಹಾಗೂ ವಿದ್ಯಾರ್ಥಿಗಳಿಗೆ ಸಹಾಯವಾಗುವಂತಹ ಮಾಹಿತಿಯನ್ನು ತಿಳಿಸಲಾಗುತ್ತಿದ್ದು ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಮಾಡುತ್ತಿದ್ದರೆ ಅಂತವರಿಗೆ ಸ್ಕಾಲರ್ಶಿಪ್ ಮಾಹಿತಿಯನ್ನು ಇವತ್ತಿನ ಲೇಖನದಲ್ಲಿ ತಿಳಿಸಲಾಗುತ್ತಿದೆ. 75,000 ಗಳ ವರೆಗೆ ಎಚ್ ಡಿ ಎಫ್ ಸಿ ಬ್ಯಾಂಕ್ ವತಿಯಿಂದ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದ್ದು ಏನೆಲ್ಲಾ ಅರ್ಹತೆಗಳು ಈ ವಿದ್ಯಾರ್ಥಿ ವೇತನವನ್ನು ಪಡೆಯಲು ಇರಬೇಕು ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿದುಕೊಳ್ಳಬಹುದು.
HDFC ಬ್ಯಾಂಕ್ ನಿಂದ ಸ್ಕಾಲರ್ಶಿಪ್ :
ಹೆಚ್ ಡಿ ಎಫ್ ಸಿ ಬ್ಯಾಂಕ್ ದೇಶದ ಖಾಸಗಿ ಬ್ಯಾಂಕುಗಳಲ್ಲಿ ಒಂದಾಗಿದ್ದು ಗ್ರಾಹಕರ ಅತ್ಯಂತ ನಂಬಿಕೆಯ ಬ್ಯಾಂಕ್ ಆಗಿದೆ ಎಂದು ಹೇಳಬಹುದಾಗಿದೆ. ಯಾವೆಲ್ಲ ವಿದ್ಯಾರ್ಥಿಗಳು ಆರ್ಥಿಕ ಸಮಸ್ಯೆಯಿಂದ ತಮ್ಮ ವಿದ್ಯಾಭ್ಯಾಸವನ್ನು ಮುಂದುವರಿಸಲು ಸಾಧ್ಯವಾಗದೆ ಇದ್ದರೆ ಅವರು ಆರ್ಥಿಕ ಸಹಾಯವನ್ನು ಈ ಒಂದು ಬ್ಯಾಂಕ್ನಿಂದ ಪಡೆಯಬಹುದಾಗಿತ್ತು ಅರ್ಹತೆಯನ್ನು ಹೊಂದಿರುವ ಎಲ್ಲಾ ವಿದ್ಯಾರ್ಥಿಗಳು ಎಚ್ ಡಿ ಎಫ್ ಸಿ ಬ್ಯಾಂಕ್ ನಿಂದ 75,000 ವರೆಗೆ ವಿದ್ಯಾರ್ಥಿ ವೇತನವನ್ನು ಪಡೆಯಬಹುದಾಗಿದೆ.
HDFC ವಿದ್ಯಾರ್ಥಿ ವೇತನ ಪಡೆಯಲು ಇರುವ ಅರ್ಹತೆಗಳು :
ಎಚ್ ಡಿ ಎಫ್ ಸಿ ಬ್ಯಾಂಕ್ ನೀಡುತ್ತಿರುವ ಈ ವಿದ್ಯಾರ್ಥಿ ವೇತನವನ್ನು ಪಡೆಯಬೇಕಾದರೆ ಕೆಲವೊಂದು ಅರ್ಹತೆಗಳನ್ನು ವಿದ್ಯಾರ್ಥಿಗಳು ಹೊಂದಿರಬೇಕು ಅವುಗಳೆಂದರೆ ಭಾರತೀಯ ರಾಗಿದ್ದು ವಿದ್ಯಾರ್ಥಿಯ ಭಾರತ ದೇಶದಲ್ಲಿ ವಿದ್ಯಾಭ್ಯಾಸ ಮಾಡುತ್ತಿರಬೇಕು. ಎಚ್ ಡಿ ಎಫ್ ಸಿ ಬ್ಯಾಂಕ್ ನ ಈ ವಿದ್ಯಾರ್ಥಿ ವೇತನಕ್ಕೆ ಒಂದನೇ ತರಗತಿಯಿಂದ ಸ್ನಾತಕೋತ್ತರ ಪದವಿ ಪಡೆಯುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯವು 2 ಲಕ್ಷ ರೂಪಾಯಿಗಿಂತ ಕಡಿಮೆ ಇರಬೇಕು.
ಅಗತ್ಯ ದಾಖಲೆಗಳು :
ಹೆಚ್ ಡಿ ಎಫ್ ಸಿ ಬ್ಯಾಂಕ್ ನೀಡುತ್ತಿರುವ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬೇಕಾದರೆ ವಿದ್ಯಾರ್ಥಿಗಳು ಕೆಲವೊಂದು ಅಗತ್ಯ ದಾಖಲೆಗಳನ್ನು ಹೊಂದಿರಬೇಕು ಆಧಾರ್ ಕಾರ್ಡ್ ಪಾನ್ ಕಾರ್ಡ್ ಅಥವಾ ಇತರೆ ಯಾವುದೇ ಐಡೆಂಟಿ ಕಾರ್ಡ್ ಅನ್ನು ವಿದ್ಯಾರ್ಥಿಗಳು ಹೊಂದಿದ್ದು ಇಂದಿನ ಶೈಕ್ಷಣಿಕ ವೃಕ್ಷದ ಮಾರ್ಕ್ಸ್ ಕಾರ್ಡ್ ಬ್ಯಾಂಕ್ ಪಾಸ್ ಬುಕ್ ಆದಾಯ ಪ್ರಮಾಣ ಪತ್ರ ಜಾತಿ ಪ್ರಮಾಣ ಪತ್ರ ಹೀಗೆ ಕೆಲವೊಂದು ಪ್ರಮುಖ ದಾಖಲೆಗಳನ್ನು ವಿದ್ಯಾರ್ಥಿಗಳು ಹೊಂದಿರಬೇಕಾಗುತ್ತದೆ.
ಅರ್ಜಿ ಸಲ್ಲಿಸುವ ಪ್ರಕ್ರಿಯೆ :
ಹೆಚ್ ದಿ ಎಫ್ ಸಿ ಬ್ಯಾಂಕ್ ನ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ಇದು ಹೆಚ್ ಡಿ ಎಫ್ ಸಿ ಬ್ಯಾಂಕ್ ನ ಅಧಿಕೃತ ವೆಬ್ಸೈಟ್ ಆಗಿದೆ.
ಇಲ್ಲಿದೆ ಅಧಿಕೃತ ಲಿಂಕ್ : ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ
ಒಟ್ಟಾರೆ ಗ್ರಾಹಕರ ನಂಬಿಕೆಯ ಬ್ಯಾಂಕ್ ಆಗಿರುವ ಈ ಎಚ್ ಡಿ ಎಫ್ ಸಿ ಬ್ಯಾಂಕ್ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವನ್ನು ನೀಡುವ ಉದ್ದೇಶದಿಂದ ವಿದ್ಯಾರ್ಥಿ ವೇತನವನ್ನು ನೀಡುತ್ತಿದ್ದು ಈ ವಿದ್ಯಾರ್ಥಿ ವೇತನವನ್ನು ಪಡೆದು ವಿದ್ಯಾರ್ಥಿಗಳು ಉನ್ನತ ಹಾಗೂ ಉತ್ತಮ ಶಿಕ್ಷಣವನ್ನು ಪಡೆಯಲು ಅನುವು ಮಾಡಿಕೊಟ್ಟಂತಾಗುತ್ತದೆ ಹಾಗಾಗಿ ಈ ವಿದ್ಯಾರ್ಥಿ ವೇತನದ ಬಗ್ಗೆ ಪ್ರತಿಯೊಬ್ಬರಿಗೂ ಶೇರ್ ಮಾಡಿ ಧನ್ಯವಾದಗಳು.